ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮಂತ್ರಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಳಿಗ್ಗೆ 11.55 ಕ್ಕೆ ಯಲಹಂಕ ವಾಯು ಪಡೆ ನಿಲ್ದಾಣಕ್ಕೆ ಆಗಮಿಸಿದರು.

ಎರಡು ದಿನಗಳ ಭೇಟಿಗಾಗಿ ರಾಜ್ಯಕ್ಕೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಯಲಹಂಕ ವಾಯು ಪಡೆ ನಿಲ್ದಾಣದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ ಅವರು, ಸಂಸದ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ಅವರುಗಳು ಉಪಸ್ಥಿತರಿದ್ದು ಅವರನ್ನು ಗೌರವಪೂರ್ವಕವಾಗಿ ಬರಮಾಡಿಕೊಂಡರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಅವರಿಗೆ ಪುಸ್ತಕವನ್ನು ನೀಡಿ ಶಾಲು ಹೊದಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಕೇಂದ್ರ ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರ ಸಚಿವರಾದ ಪ್ರಹ್ಲಾದ್ ಜೋಶಿ, ಮಾಜಿ ಮುಖ್ಯ ಮಂತ್ರಿ ಬಿ.ಎಸ್ ಯಡಿಯೂರಪ್ಪ,, ಸಚಿವರಾದ ಆರ್ ಅಶೋಕ್, ಅರಗ ಜ್ಞಾನೇಂದ್ರ, ಮಾಧುಸ್ವಾಮಿ ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು, ವಾಯು ಸೇನಾ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published.